Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು

Horoscope ಜುಲೈ 12, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jul 12, 2021 | 6:29 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಸೋಮವಾರ, ಜುಲೈ 12, 2021. ಆಶ್ಲೇಷ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.26 ರಿಂದ ಇಂದು ಬೆಳಿಗ್ಗೆ 9.4 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.48. ಸೂರ್ಯಾಸ್ತ: ಸಂಜೆ 6.54

ತಾ.12-07-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 1

ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 9

ಮಿಥುನ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 2

ಕಟಕ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 8

ಸಿಂಹ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 3

ಕನ್ಯಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 6

ತುಲಾ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 4

ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 5

ಧನು: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 9

ಮಕರ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 1

ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 3

ಮೀನ: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವುದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ