AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ

Horoscope ಜುಲೈ 13, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ
ದಿನ ಭವಿಷ್ಯ
TV9 Web
| Edited By: |

Updated on: Jul 13, 2021 | 6:32 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ತದಿಗೆ ತಿಥಿ, ಮಂಗಳವಾರ, ಜುಲೈ 13, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.37 ರಿಂದ ಇಂದು ಸಂಜೆ 5.15 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.49. ಸೂರ್ಯಾಸ್ತ: ಸಂಜೆ 6.54

ತಾ.13-07-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 3

ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 8

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1

ಕಟಕ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 9

ಸಿಂಹ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 5

ಕನ್ಯಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುvಉದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 4

ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6

ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 4

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 1

ಕುಂಭ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 7

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 8

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ