ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಚೌತಿ ತಿಥಿ, ಬುಧವಾರ, ಜುಲೈ 14, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.21 ರಿಂದ ಇಂದು ಮಧ್ಯಾಹ್ನ 1.59 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.49. ಸೂರ್ಯಾಸ್ತ: ಸಂಜೆ 6.54
ತಾ.14-07-2021 ರ ಬುಧವಾರದ ರಾಶಿಭವಿಷ್ಯ
ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 3
ವೃಷಭ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 9
ಮಿಥುನ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 4
ಕಟಕ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 6
ಸಿಂಹ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವದು. ಶುಭ ಸಂಖ್ಯೆ:2
ಕನ್ಯಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ:5
ತುಲಾ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 8
ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 3
ಧನು: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 7
ಮಕರ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ:4
ಕುಂಭ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 9
ಮೀನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 1