Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಲಿದೆ

| Updated By: ಆಯೇಷಾ ಬಾನು

Updated on: Jul 15, 2021 | 6:34 AM

Horoscope ಜುಲೈ 15, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ಪ್ಲವನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಗುರುವಾರ, ಜುಲೈ 15, 2021.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಲಿದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಗುರುವಾರ, ಜುಲೈ 15, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.59 ರಿಂದ ಇಂದು ಸಂಜೆ 3.37 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.49. ಸೂರ್ಯಾಸ್ತ: ಸಂಜೆ 6.54

ತಾ.15-07-2021 ರ ಗುರುವಾರದ ರಾಶಿಭವಿಷ್ಯ, ಪಂಚಾಂಗ.

ಮೇಷ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 5

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 3

ಕಟಕ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 5

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 7

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ತುಲಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 2

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ಧನು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 6

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 9

ಕುಂಭ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 5

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937