ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಶುಕ್ರವಾರ, ಜುಲೈ 16, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.44 ರಿಂದ ಇಂದು ಬೆಳಿಗ್ಗೆ 12.22 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.50. ಸೂರ್ಯಾಸ್ತ: ಸಂಜೆ 6.54
ತಾ.16-07-2021 ರ ಶುಕ್ರವಾರದ, ರಾಶಿಭವಿಷ್ಯ,
ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9
ವೃಷಭ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 5
ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 8
ಕಟಕ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 4
ಸಿಂಹ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ. ವ್ಯವಹಾರದಲ್ಲಿ ಮಂದಗತಿ ಇರುವುದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ. ಶುಭ ಸಂಖ್ಯೆ: 7
ಕನ್ಯಾ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 3
ತುಲಾ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂರದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 6
ವೃಶ್ಚಿಕ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 2
ಧನು: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 9
ಮಕರ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 1
ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 8
ಮೀನ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 2
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937