AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ

Horoscope ಜುಲೈ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Edited By: |

Updated on: Jul 17, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಶನಿವಾರ, ಜುಲೈ 17, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.05 ರಿಂದ ಇಂದು ಬೆಳಿಗ್ಗೆ 10.42 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.50. ಸೂರ್ಯಾಸ್ತ: ಸಂಜೆ 6.53

ತಾ.17-07-2021 ರ ಶನಿವಾರದ ರಾಶಿಭವಿಷ್ಯ,

ಮೇಷ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9

ವೃಷಭ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 1

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8

ಕಟಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂಧಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 2

ಸಿಂಹ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 7

ಕನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 3

ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 5

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 2

ಕುಂಭ: ಆಶೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ