AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ರಾಶಿ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ನವಮಿ ತಿಥಿ, ಭಾನುವಾರ, ಜುಲೈ 18, 2021ರ ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ರಾಶಿ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?
ರಾಶಿ ಭವಿಷ್ಯ
TV9 Web
| Edited By: |

Updated on: Jul 18, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ನವಮಿ ತಿಥಿ, ಭಾನುವಾರ, ಜುಲೈ 18, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:15ರಿಂದ ಇಂದು ಸಂಜೆ 6:52  ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.50. ಸೂರ್ಯಾಸ್ತ: ಸಂಜೆ 6.53

ತಾ.18-07-2021 ರ ರಾಶಿಭವಿಷ್ಯ, ಪಂಚಾಂಗ.

ಮೇಷ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವದು. ಶುಭ ಸಂಖ್ಯೆ: 6

ವೃಷಭ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 9

ಮಿಥುನ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 1

ಕರ್ಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 8

ಸಿಂಹ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 5

ಕನ್ಯಾ:  ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 2

ತುಲಾ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ:7

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು, ಅವಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 4

ಧನು: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 3

ಮಕರ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಕುಂಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 5

ಮೀನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 2

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ