Horoscope Today – ದಿನ ಭವಿಷ್ಯ; ಈ ರಾಶಿಯವರ ಮನೆಯಲ್ಲಿ ಅಸಮಾಧಾನ ಇರುವುದು
Horoscope ಜುಲೈ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಬುಧವಾರ, ಜುಲೈ 21, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.21 ರಿಂದ ಇಂದು ಮಧ್ಯಾಹ್ನ 1.58 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.51. ಸೂರ್ಯಾಸ್ತ: ಸಂಜೆ 6.53
ತಾ.21-07-2021 ರ ಬುಧವಾರದ ರಾಶಿಭವಿಷ್ಯ.
ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5
ವೃಷಭ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9
ಮಿಥುನ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 2
ಕಟಕ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 7
ಸಿಂಹ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 4
ಕನ್ಯಾ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವುದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 8
ತುಲಾ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 6
ವೃಶ್ಚಿಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತ್ರುಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 3
ಧನು: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2
ಮಕರ: ಅನಾವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 1
ಕುಂಭ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕ್ಷಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 5
ಮೀನ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 9