Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು

Horoscope ಜುಲೈ 23, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು
ದಿನ ಭವಿಷ್ಯ


ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಶುಕ್ರವಾರ, ಜುಲೈ 23, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.44 ರಿಂದ ಇಂದು ಬೆಳಿಗ್ಗೆ 12.21 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.52. ಸೂರ್ಯಾಸ್ತ: ಸಂಜೆ 6.52

ತಾ.23-07-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 5

ವೃಷಭ: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 9

ಮಿಥುನ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 1

ಕಟಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 4

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 8

ಕನ್ಯಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ತುಲಾ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 7

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 2

ಧನು: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 6

ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

ಕುಂಭ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 1

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937