Horoscope Today – ದಿನ ಭವಿಷ್ಯ; ಈ ರಾಶಿಯವರು ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಮಾಡಬೇಡಿ
Horoscope ಜುಲೈ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಶನಿವಾರ, ಜುಲೈ 24, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.07 ರಿಂದ ಇಂದು ಬೆಳಿಗ್ಗೆ 10.44 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.52. ಸೂರ್ಯಾಸ್ತ: ಸಂಜೆ 6.52
ತಾ.24-07-2021 ರ ಶನಿವಾರದ ರಾಶಿಭವಿಷ್ಯ.
ಮೇಷ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 6
ವೃಷಭ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 9
ಮಿಥುನ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 2
ಕಟಕ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8
ಸಿಂಹ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 3
ಕನ್ಯಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 1
ತುಲಾ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 7
ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 4
ಧನು: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ಮಕರ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 2
ಕುಂಭ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5
ಮೀನ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 3
(Horoscope Today Know Your Rashi Bhavishya 2021 July 24 Basavaraj Guruji Prediction)
Published On - 6:30 am, Sat, 24 July 21