Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

| Updated By: ಆಯೇಷಾ ಬಾನು

Updated on: Jul 25, 2021 | 6:24 AM

ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಭಾನುವಾರ, ಜುಲೈ 25, 2021

Horoscope Today - ದಿನ ಭವಿಷ್ಯ;  ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಭಾನುವಾರ, ಜುಲೈ 25, 2021. ಶ್ರವಣ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:4ರಿಂದ ಇಂದು ರಾತ್ರಿ 6:51 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.53. ಸೂರ್ಯಾಸ್ತ: ಸಂಜೆ 6.52 ತನಕ.

ತಾ.25-07-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ವೃಷಭ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು. ಶುಭ ಸಂಖ್ಯೆ: 1

ಮಿಥುನ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 9

ಕರ್ಕ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು.ಶುಭ ಸಂಖ್ಯೆ: 4

ಸಿಂಹ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7

ಕನ್ಯಾ: ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 8

ತುಲಾ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 5

ವೃಶ್ಚಿಕ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 1

ಧನು: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 3

ಮಕರ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 6

ಕುಂಭ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ:  7

ಮೀನ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವದು. ಶುಭ ಸಂಖ್ಯೆ: 4

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

(Horoscope Today Know Your Rashi Bhavishya 2021 July 25 Basavaraj Guruji Prediction)