Horoscope Today- ದಿನ ಭವಿಷ್ಯ; ಈ ರಾಶಿಯ ಹಿರಿಯರಿಗೆ ಅನಾರೋಗ್ಯ ಸಂಭವ

Horoscope ಜುಲೈ 27, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯ ಹಿರಿಯರಿಗೆ ಅನಾರೋಗ್ಯ ಸಂಭವ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jul 27, 2021 | 6:23 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಚೌತಿ ತಿಥಿ, ಮಂಗಳವಾರ, ಜುಲೈ 27, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.36 ರಿಂದ ಇಂದು ಸಂಜೆ 5.13 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.53. ಸೂರ್ಯಾಸ್ತ: ಸಂಜೆ 6.51

ತಾ.27-07-2021 ರ ಮಂಗಳವಾರದ ರಾಶಿಭವಿಷ್ಯ,

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 9

ಮಿಥುನ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 1

ಕಟಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 8

ಸಿಂಹ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 4

ಕನ್ಯಾ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವುದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 7

ತುಲಾ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 3

ವೃಶ್ಚಿಕ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 2

ಧನು: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5

ಮಕರ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 3

ಕುಂಭ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 6

ಮೀನ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೇಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ