Horoscope Today- ದಿನ ಭವಿಷ್ಯ; ಈ ರಾಶಿಯವರು ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ
Horoscope ಜುಲೈ 29, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಗುರುವಾರ, ಜುಲೈ 29, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.59 ರಿಂದ ಇಂದು ಸಂಜೆ 3.36 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.54. ಸೂರ್ಯಾಸ್ತ: ಸಂಜೆ 6.50
ತಾ.29-07-2021 ರ ಗುರುವಾರದ ರಾಶಿಭವಿಷ್ಯ.
ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ವೃಷಭ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 9
ಮಿಥುನ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 4
ಕಟಕ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 3
ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರುವುದು. ಶುಭ ಸಂಖ್ಯೆ: 7
ಕನ್ಯಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 1
ತುಲಾ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 2
ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 4
ಧನು: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5
ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 4
ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1
ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 3