Horoscope Today – ದಿನ ಭವಿಷ್ಯ; ಈ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ
Horoscope ಜುಲೈ 31, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಶನಿವಾರ, ಜುಲೈ 31, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.07 ರಿಂದ ಇಂದು ಬೆಳಿಗ್ಗೆ 10.43 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.54. ಸೂರ್ಯಾಸ್ತ: ಸಂಜೆ 6.49
ತಾ.31-07-2021 ರ ಶನಿವಾರ ರಾಶಿಭವಿಷ್ಯ
ಮೇಷ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗೃಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 5
ವೃಷಭ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 7
ಮಿಥುನ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಾಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 1
ಕಟಕ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 8
ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 4
ಕನ್ಯಾ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 5
ತುಲಾ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 2
ವೃಶ್ಚಿಕ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನಃ ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 6
ಧನು: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕ್ಷಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 3
ಮಕರ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆ ನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 6
ಕುಂಭ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 8
ಮೀನ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂರದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 3