Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಲಿದೆ
Horoscope ಜೂನ್ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಮಂಗಳವಾರ, ಜೂನ್ 01, 2021. ಧನಿಷ್ಠಾ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.29 ರಿಂದ ಇಂದು ಸಂಜೆ 5.07 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.46.
ತಾ.01-06-2021 ರ ಮಂಗಳವಾರದ ರಾಶಿಭವಿಷ್ಯ
ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7
ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 3
ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8
ಕಟಕ: ಕೃಷಿಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೇಕ್ಷಿಸದೆ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 4
ಸಿಂಹ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು. ಶುಭ ಸಂಖ್ಯೆ: 9
ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 2
ತುಲಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 6
ವೃಶ್ಚಿಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 4
ಧನು: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 5
ಮಕರ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 7
ಕುಂಭ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 9
ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 3
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937