ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಬುಧವಾರ, ಜೂನ್ 02, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.13 ರಿಂದ ಇಂದು ಮಧ್ಯಾಹ್ನ 1.51 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.47.
ತಾ.02-06-2021 ರ ಬುಧವಾರದ ರಾಶಿಭವಿಷ್ಯ:
ಮೇಷ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 4
ವೃಷಭ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 9
ಮಿಥುನ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1
ಕಟಕ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7
ಸಿಂಹ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 3
ಕನ್ಯಾ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 8
ತುಲಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 3
ವೃಶ್ಚಿಕ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 5
ಧನು: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 7
ಮಕರ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 6
ಕುಂಭ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 1
ಮೀನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937
Published On - 6:36 am, Wed, 2 June 21