Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೃಷಿ ಮೂಲದ ಲಾಭ ದೊರೆಯುವುದು
Horoscope ಜೂನ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ನವಮಿ ತಿಥಿ, ಗುರುವಾರ, ಜೂನ್ 03, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.51 ರಿಂದ ಇಂದು ಸಂಜೆ 3.29 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.47
ತಾ.03-06-2021 ರ ಗುರುವಾರದ ರಾಶಿಭವಿಷ್ಯ.
ಮೇಷ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರ ಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 7
ವೃಷಭ: ಕೃಷಿ ಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೇಕ್ಷಿಸದೇ ಸ್ವಂತ ಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 3
ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು. ಶುಭ ಸಂಖ್ಯೆ: 6
ಕಟಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 1
ಸಿಂಹ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡು ಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 6
ಕನ್ಯಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 5
ತುಲಾ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 2
ವೃಶ್ಚಿಕ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 8
ಧನು: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 4
ಮಕರ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 1
ಕುಂಭ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕ ಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 9
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 4
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937