Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು

Horoscope ಜೂನ್ 05, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು
ದಿನ ಭವಿಷ್ಯ
Follow us
TV9 Web
| Updated By: Skanda

Updated on: Jun 05, 2021 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ, ಶನಿವಾರ, ಜೂನ್ 05, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8.56 ರಿಂದ ಇಂದು ಬೆಳಿಗ್ಗೆ 10.34 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.48

ತಾ.05-6-2021 ರ ಶನಿವಾರದ ರಾಶಿಭವಿಷ್ಯ:-

ಮೇಷ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 5

ವೃಷಭ: ಕಾಯಕನಿಷ್ಠೆ ನಿಮಗೆ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಕಟಕ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವುದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವುದು. ಶುಭ ಸಂಖ್ಯೆ: 8

ಸಿಂಹ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ಕನ್ಯಾ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 7

ತುಲಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 2

ವೃಶ್ಚಿಕ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಳಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು. ಶುಭ ಸಂಖ್ಯೆ: 6

ಧನು: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಕರ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆ ವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟ ಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

ಕುಂಭ: ವಿಶೇಷ ರೀತಿಯ ಕಾರ್ಯವೊದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 5

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ