Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದ ಫಲಾಫಲಗಳ ಬಗ್ಗೆ ಇಲ್ಲಿದೆ ಮಾಹಿತಿ
ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ, ಭಾನುವಾರ, ಜೂನ್ 06, 2021 ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ, ಭಾನುವಾರ, ಜೂನ್ 06, 2021. ಅಶ್ವಿನಿ ನಕ್ಷತ್ರ, ರಾಹುಕಾಲ : ಇಂದು ಸಂಜೆ 5:9 ಇಂದ ಸಂಜೆ 6:47 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.48
ತಾ.06-06-2021 ರ ಭಾನುವಾರದ ರಾಶಿಭವಿಷ್ಯ.
ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5
ವೃಷಭ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 1
ಮಿಥುನ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 4
ಕರ್ಕ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 2
ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 9
ಕನ್ಯಾ: ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು. ಶುಭ ಸಂಖ್ಯೆ: 3
ತುಲಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು. ಶುಭ ಸಂಖ್ಯೆ: 8
ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ. ಶುಭ ಸಂಖ್ಯೆ: 7
ಧನು: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 6
ಮಕರ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 5
ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 1
ಮೀನ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 2
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937