Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇದೆ ಎಚ್ಚರಿಕೆ ವಹಿಸಿ

Horoscope: ಜೂನ್ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇದೆ ಎಚ್ಚರಿಕೆ ವಹಿಸಿ
ದಿನ ಭವಿಷ್ಯ
Follow us
TV9 Web
| Updated By: Skanda

Updated on: Jun 07, 2021 | 6:37 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಸೋಮವಾರ, ಜೂನ್ 07, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.18 ರಿಂದ ಇಂದು ಬೆಳಿಗ್ಗೆ 8.56 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.48

ತಾ.07-06-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 9

ವೃಷಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1

ಮಿಥುನ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ಕಟಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 2

ಸಿಂಹ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆ ವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 7

ಕನ್ಯಾ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 3

ತುಲಾ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 5

ಧನು: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣ ತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ.ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 4

ಮಕರ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

ಕುಂಭ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 3

ಮೀನ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ