Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು

Horoscope ಜೂನ್ 08, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on:Jun 08, 2021 | 6:36 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಮಂಗಳವಾರ, ಜೂನ್ 08, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.31 ರಿಂದ ಇಂದು ಸಂಜೆ 5.09 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.49

ತಾ.08-06-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 6

ವೃಷಭ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 9

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ: 5

ಸಿಂಹ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 7

ಕನ್ಯಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 2

ತುಲಾ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 8

ವೃಶ್ಚಿಕ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 3

ಧನು: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 7

ಮಕರ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 4

ಕುಂಭ: ನಿಮ್ಮ ಶತ್ರುಗಳು ತಮ್ಮ ಕೃತ್ಯಗಳಿಂದ ತಾವಾಗಿಯೇ ಮಣಿಯುವರು. ಶತ್ರುದೋಷ ಪರಿಹಾರವಾಗುವುದು.ಚೋರ ಭಯ, ಅಗ್ನಿ ಭಯ ಮುಂತಾದ ಭಯ ನಿವಾರಣೆಯಾಗುವುದು. ಪುತ್ರಸೌಖ್ಯ, ಮನೆಯಲ್ಲಿ ಸಂತೋಷವಿರುವದು. ಶುಭ ಸಂಖ್ಯೆ: 1

ಮೀನ: ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:33 am, Tue, 8 June 21

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ