Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ

Horoscope ಜೂನ್ 09, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jun 09, 2021 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಬುಧವಾರ, ಜೂನ್ 09, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.14 ರಿಂದ ಇಂದು ಮಧ್ಯಾಹ್ನ 1.52 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.49

ತಾ.09-06-2021 ರ ಬುಧವಾರದ ರಾಶಿಭವಿಷ್ಯ: ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 3

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಮಿಥುನ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 1

ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 7

ಸಿಂಹ: ಒಳ್ಳೆಯ ಮಾತುಗಳಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 6

ಕನ್ಯಾ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 8

ತುಲಾ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 4

ಧನು: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 9

ಮಕರ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 1

ಕುಂಭ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 7

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ