ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಅಮಾವಾಸ್ಯೆ ತಿಥಿ, ಬುಧವಾರ, ಜೂನ್ 10, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.53 ರಿಂದ ಇಂದು ಸಂಜೆ 3.31 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.49
ತಾ.10-06-2021 ರ ಗುರುವಾರದ ರಾಶಿಭವಿಷ್ಯ:
ಮೇಷ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 7
ವೃಷಭ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 1
ಮಿಥುನ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 9
ಕಟಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 4
ಸಿಂಹ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 5
ಕನ್ಯಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 3
ತುಲಾ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 9
ವೃಶ್ಚಿಕ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4
ಧನು: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ: 8
ಮಕರ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 2
ಕುಂಭ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 1
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 6