Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತವೆ
Horoscope ಜೂನ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಶುಕ್ರವಾರ, ಜೂನ್ 11, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.36 ರಿಂದ ಇಂದು ಬೆಳಿಗ್ಗೆ 12.14 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.50
ತಾ.11-06-2021 ರ ಶುಕ್ರವಾರದ ರಾಶಿಭವಿಷ್ಯ
ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 4
ವೃಷಭ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 5
ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 3
ಕಟಕ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚು ಬರಬಹುದು. ಶುಭ ಸಂಖ್ಯೆ: 9
ಸಿಂಹ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6
ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯದ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 8
ತುಲಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 4
ವೃಶ್ಚಿಕ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 7
ಧನು: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 5
ಮಕರ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಭ್ರಮಗಳಿರುತ್ತವೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 2
ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 7
ಮೀನ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 9