Horoscope Today – ದಿನ ಭವಿಷ್ಯ; ಈ ರಾಶಿಯವರು ಬರುವ ಕಷ್ಟಗಳನ್ನು ಎದುರಿಸಿ ಸಫಲತೆ ಹೊಂದುವಿರಿ

| Updated By: Skanda

Updated on: Jun 12, 2021 | 6:30 AM

Horoscope ಜೂನ್ 12, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರು ಬರುವ ಕಷ್ಟಗಳನ್ನು ಎದುರಿಸಿ ಸಫಲತೆ ಹೊಂದುವಿರಿ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಶನಿವಾರ, ಜೂನ್ 12, 2021. ಆರಿದ್ರಾ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8.58 ರಿಂದ ಇಂದು ಬೆಳಿಗ್ಗೆ 10.36 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.50

ತಾ.12-06-2021 ರ ಶನಿವಾರದ ರಾಶಿಭವಿಷ್ಯ:

ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 5

ವೃಷಭ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವುದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 9

ಮಿಥುನ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 1

ಕಟಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 6

ಸಿಂಹ: ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 3

ಕನ್ಯಾ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 8

ತುಲಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 7

ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 4

ಧನು: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 3

ಮಕರ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಳಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 7

ಕುಂಭ: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವುದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 2

ಮೀನ: ನಿಮ್ಮ ಶತ್ರುಗಳು ತಮ್ಮ ಕೃತ್ಯಗಳಿಂದ ತಾವಾಗಿಯೇ ಮಣಿಯುವರು. ಶತ್ರುದೋಷ ಪರಿಹಾರವಾಗುವುದು.ಚೋರ ಭಯ, ಅಗ್ನಿ ಭಯ ಮುಂತಾದ ಭಯ ನಿವಾರಣೆಯಾಗುವುದು. ಪುತ್ರಸೌಖ್ಯ, ಮನೆಯಲ್ಲಿ ಸಂತೋಷವಿರುವುದು. ಶುಭ ಸಂಖ್ಯೆ: 8

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937