Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯರ್ಯಾರಿಗೆ ಒಳಿತು?

| Updated By: ಆಯೇಷಾ ಬಾನು

Updated on: Jun 13, 2021 | 6:38 AM

ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ತದಿಗೆ ತಿಥಿ, ಭಾನುವಾರ, ಜೂನ್ 13, 2021ರ ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯರ್ಯಾರಿಗೆ ಒಳಿತು?
ರಾಶಿ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ತದಿಗೆ ತಿಥಿ, ಭಾನುವಾರ, ಜೂನ್ 13, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಸಂಜೆ 5 :11 ರಿಂದ ಇಂದು ಸಂಜೆ 6:49ರ ತನ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.50

ತಾ.20-06-2021 ರ ಭಾನುವಾರದ ರಾಶಿಭವಿಷ್ಯ

ಮೇಷ:ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವದು.
ಶುಭ ಸಂಖ್ಯೆ: 2

ವೃಷಭ:ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ.
ಶುಭ ಸಂಖ್ಯೆ: 9

ಮಿಥುನ:ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ.
ಶುಭ ಸಂಖ್ಯೆ: 4

ಕರ್ಕ:ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ.
ಶುಭ ಸಂಖ್ಯೆ: 7

ಸಿಂಹ:ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು.
ಶುಭ ಸಂಖ್ಯೆ: 3

ಕನ್ಯಾ:ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
ಶುಭ ಸಂಖ್ಯೆ: 6

ತುಲಾ:ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ.
ಶುಭ ಸಂಖ್ಯೆ: 8

ವೃಶ್ಚಿಕ:ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.
ಶುಭ ಸಂಖ್ಯೆ: 5

ಧನು:ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು.
ಶುಭ ಸಂಖ್ಯೆ: 1

ಮಕರ:ಹಳೆಯ ಸಾಲ ಮರುಪಾವತಿಯಾಗುವದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ.
ಶುಭ ಸಂಖ್ಯೆ: 4

ಕುಂಭ:ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು.
ಶುಭ ಸಂಖ್ಯೆ: 9

ಮೀನ:ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.
ಶುಭ ಸಂಖ್ಯೆ: 3

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937