Horoscope Today – ದಿನ ಭವಿಷ್ಯ; ಈ ರಾಶಿಯವರ ಮನೆಯಲ್ಲಿ ಅಸಮಾಧಾನ ಇರುವುದು

Horoscope ಜೂನ್ 14, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರ ಮನೆಯಲ್ಲಿ ಅಸಮಾಧಾನ ಇರುವುದು
ದಿನ ಭವಿಷ್ಯ
Follow us
TV9 Web
| Updated By: Skanda

Updated on: Jun 14, 2021 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಚೌತಿ ತಿಥಿ, ಸೋಮವಾರ, ಜೂನ್ 14, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.19 ರಿಂದ ಇಂದು ಬೆಳಿಗ್ಗೆ 8.57 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.51

ತಾ.14-06-2021 ರ ಸೋಮವಾರದ ರಾಶಿಭವಿಷ್ಯ:

ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 9

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1

ಕಟಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆ ಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 4

ಸಿಂಹ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 7

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5

ಧನು: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 2

ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡುಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 6

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 3

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937