Horoscope Today – ದಿನ ಭವಿಷ್ಯ; ಈ ದಿನ ಯಾವ ರಾಶಿಯವರಿಗೆ ಆಗಲಿದೆ ಮಂಗಳ, ದ್ವಾದಶ ರಾಶಿಗಳ ಭವಿಷ್ಯ
Horoscope ಜೂನ್ 15, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಮಂಗಳವಾರ, ಜೂನ್ 15, 2021. ಆಶ್ಲೇಷ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.33 ರಿಂದ ಇಂದು ಸಂಜೆ 5.11 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.51
ತಾ.15-06-2021 ರ ಮಂಗಳವಾರದ ರಾಶಿಭವಿಷ್ಯ.
ಮೇಷ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6
ವೃಷಭ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9
ಮಿಥುನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 3
ಕಟಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 8
ಸಿಂಹ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಿಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 5
ಕನ್ಯಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 7
ತುಲಾ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 4
ವೃಶ್ಚಿಕ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 1
ಧನು: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 8
ಮಕರ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 3
ಕುಂಭ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 5
ಮೀನ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 9