Horoscope Today- ದಿನ ಭವಿಷ್ಯ; ಈ ರಾಶಿಯವರು ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು, ಪರಿಹಾರ ಇಲ್ಲಿದೆ

Horoscope ಜೂನ್ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು, ಪರಿಹಾರ ಇಲ್ಲಿದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jun 16, 2021 | 6:26 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಬುಧವಾರ, ಜೂನ್ 16, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.15 ರಿಂದ ಇಂದು ಮಧ್ಯಾಹ್ನ 1.53 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.51

ತಾ.16-06-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಮಿಥುನ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 5

ಕಟಕ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 8

ಸಿಂಹ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 4

ಕನ್ಯಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 7

ತುಲಾ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 6

ಧನು: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಕರ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 4

ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 7

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937