AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗಲಿದೆ

Horoscope ಜೂನ್ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ: ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗಲಿದೆ
ದಿನ ಭವಿಷ್ಯ
TV9 Web
| Updated By: Skanda|

Updated on: Jun 17, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಗುರುವಾರ, ಜೂನ್ 17, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.54 ರಿಂದ ಇಂದು ಸಂಜೆ 3.32 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.51

ತಾ.17-06-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 2

ವೃಷಭ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 4

ಮಿಥುನ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 1

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 5

ಕನ್ಯಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗೃಹ ಸೌಖ್ಯವಿರುವುದು. ಶುಭ ಸಂಖ್ಯೆ: 7

ತುಲಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 8

ಧನು: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯ ವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷದ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 4

ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೇಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 1

ಕುಂಭ: ವ್ಯಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವುದು. ವ್ಯಾಪಾರದಲ್ಲಿ ಹಣಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ಶುಭ ಸಂಖ್ಯೆ: 3

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್