Horoscope Today- ದಿನ ಭವಿಷ್ಯ; ಈ ದಿನ ಯಾವ ರಾಶಿಯವರಿಗೆ ಏನು ಫಲ

| Updated By: ಆಯೇಷಾ ಬಾನು

Updated on: Jun 18, 2021 | 6:25 AM

Horoscope ಜೂನ್ 18, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ದಿನ ಯಾವ ರಾಶಿಯವರಿಗೆ ಏನು ಫಲ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಶುಕ್ರವಾರ, ಜೂನ್ 18, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.38 ರಿಂದ ಇಂದು ಬೆಳಿಗ್ಗೆ 12.16 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.52

ತಾ.18-06-2021 ರ ಶುಕ್ರವಾರ ದ ರಾಶಿಭವಿಷ್ಯ:

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ಮಿಥುನ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 8

ಕಟಕ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 1

ಕನ್ಯಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 4

ತುಲಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 5

ವೃಶ್ಚಿಕ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 1

ಧನು: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 6

ಮಕರ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 9

ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 8

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜೊತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937