AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ

Horoscope ಜೂನ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ
ದಿನ ಭವಿಷ್ಯ
TV9 Web
| Updated By: ಆಯೇಷಾ ಬಾನು|

Updated on: Jun 21, 2021 | 6:28 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಸೋಮವಾರ, ಜೂನ್ 21, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.20 ರಿಂದ ಇಂದು ಬೆಳಿಗ್ಗೆ 8.58 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.52

ತಾ.21-06-2021 ರ ಸೋಮವಾರದ ರಾಶಿಭವಿಷ್ಯ:

ಮೇಷ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 4

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 9

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1

ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ:5

ಸಿಂಹ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಕನ್ಯಾ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 2

ತುಲಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅವಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 3

ಧನು: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 6

ಮಕರ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 1

ಕುಂಭ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 7

ಮೀನ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ