Horoscope Today – ದಿನ ಭವಿಷ್ಯ; ಈ ರಾಶಿಯವರು ಬರುವ ಕಷ್ಟಗಳನ್ನು ಎದುರಿಸಿ ಸಫಲತೆ ಹೊಂದುವಿರಿ

Horoscope ಜೂನ್ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರು ಬರುವ ಕಷ್ಟಗಳನ್ನು ಎದುರಿಸಿ ಸಫಲತೆ ಹೊಂದುವಿರಿ
ದಿನ ಭವಿಷ್ಯ
Follow us
TV9 Web
| Updated By: Skanda

Updated on: Jun 22, 2021 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಮಂಗಳವಾರ, ಜೂನ್ 22, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.35 ರಿಂದ ಇಂದು ಸಂಜೆ 5.13 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.53

ತಾ.22-06-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ವೃಷಭ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 9

ಮಿಥುನ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 2

ಕಟಕ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 4

ಸಿಂಹ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶ ಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 5

ಕನ್ಯಾ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 6

ತುಲಾ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 2

ವೃಶ್ಚಿಕ: ಆಶೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 7

ಧನು: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 6

ಮಕರ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 8

ಕುಂಭ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಮೀನ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ