Horoscope Today – ದಿನ ಭವಿಷ್ಯ; ಈ ರಾಶಿಯವರ ಪರಿವಾರದಲ್ಲಿ ಹೊಸಕಳೆ ಬರುವುದು, ಸುಖ ಇರುವುದು

| Updated By: Skanda

Updated on: Jun 24, 2021 | 6:30 AM

Horoscope ಜೂನ್ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರ ಪರಿವಾರದಲ್ಲಿ ಹೊಸಕಳೆ ಬರುವುದು, ಸುಖ ಇರುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಗುರುವಾರ, ಜೂನ್ 24, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.56 ರಿಂದ ಇಂದು ಸಂಜೆ 3.34 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.43. ಸೂರ್ಯಾಸ್ತ: ಸಂಜೆ 6.53

ತಾ.24-06-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ:4

ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 7

ಮಿಥುನ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರ ಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 8

ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು.ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 6

ಸಿಂಹ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 1

ಕನ್ಯಾ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 9

ತುಲಾ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 3

ವೃಶ್ಚಿಕ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವುದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 7

ಧನು: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 1

ಮಕರ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 5

ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 8

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937