Horoscope Today – ದಿನ ಭವಿಷ್ಯ; ಈ ರಾಶಿಯ ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಯನ್ನು ಗೆಲ್ಲುವ ಛಾತಿ ಇದೆ
Horoscope ಜೂನ್ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಶುಕ್ರವಾರ, ಜೂನ್ 25, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.39 ರಿಂದ ಇಂದು ಬೆಳಿಗ್ಗೆ 12.17 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.43. ಸೂರ್ಯಾಸ್ತ: ಸಂಜೆ 6.53
ತಾ.25-06-2021 ರ ಶುಕ್ರವಾರದ ರಾಶಿಭವಿಷ್ಯ
ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 7
ವೃಷಭ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಳಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 2
ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 5
ಕಟಕ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೆ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 9
ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 4
ಕನ್ಯಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7
ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3
ವೃಶ್ಚಿಕ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 8
ಧನು: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 1
ಮಕರ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಠುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 4
ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 6
ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಯನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 9
Published On - 6:30 am, Fri, 25 June 21