Horoscope Today- ದಿನ ಭವಿಷ್ಯ; ತಿಳಿದುಕೊಳ್ಳಿ ಭಾನುವಾರದ ಭವಿಷ್ಯ
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಭಾನುವಾರ, ಜೂನ್ 27, 2021.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಭಾನುವಾರ, ಜೂನ್ 27, 2021. ಶ್ರವಣ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:14 ರಿಂದ ಇಂದು ರಾತ್ರಿ 6: 52 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.44. ಸೂರ್ಯಾಸ್ತ: ಸಂಜೆ 6.53
ತಾ.26-06-2021 ರ ಭಾನುವಾರ ರಾಶಿಭವಿಷ್ಯ, ಪಂಚಾಂಗ.
ಮೇಷ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 6
ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 9
ಮಿಥುನ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 1
ಕಟಕ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 8
ಸಿಂಹ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 5
ಕನ್ಯಾ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 2
ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತ ಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7
ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 4
ಧನು: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕ್ಷಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 3
ಮಕರ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 8
ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಳಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 1
ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 5
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937