Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಒಳ್ಳೆ ಕಾಲ ಆರಂಭ, ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು

Horoscope ಜೂನ್ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಒಳ್ಳೆ ಕಾಲ ಆರಂಭ, ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jun 28, 2021 | 6:31 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಚೌತಿ ತಿಥಿ, ಸೋಮವಾರ, ಜೂನ್ 28, 2021. ಧನಿಷ್ಥೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.22 ರಿಂದ ಇಂದು ಬೆಳಿಗ್ಗೆ 9.00 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.44. ಸೂರ್ಯಾಸ್ತ: ಸಂಜೆ 6.54

ತಾ.28-06-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 9

ಮಿಥುನ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 4

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 8

ಸಿಂಹ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 3

ಕನ್ಯಾ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ತುಲಾ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ಧನು: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 5

ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 9

ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 4

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Daily Devotional: ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ, ವಿಡಿಯೋ ನೋಡಿ
Daily Devotional: ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ, ವಿಡಿಯೋ ನೋಡಿ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ