Horoscope Today- ದಿನ ಭವಿಷ್ಯ; ಈ ರಾಶಿಯವರು ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುವರು

Horoscope ಜೂನ್ 29, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುವರು
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on:Jun 29, 2021 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಮಂಗಳವಾರ, ಜೂನ್ 29, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.36 ರಿಂದ ಇಂದು ಸಂಜೆ 5.14 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.44. ಸೂರ್ಯಾಸ್ತ: ಸಂಜೆ 6.54

ತಾ.29-06-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 7

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಸಿಂಹ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 4

ಕನ್ಯಾ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 6

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7

ಧನು: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 8

ಮಕರ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 3

ಕುಂಭ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 4

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:30 am, Tue, 29 June 21

Daily Devotional: ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ, ವಿಡಿಯೋ ನೋಡಿ
Daily Devotional: ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ, ವಿಡಿಯೋ ನೋಡಿ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ