Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಮದುವೆ ಮಾತುಕತೆಗಳಲ್ಲಿ ಸಫಲತೆ ಇದೆ
Horoscope ಜೂನ್ 30, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಬುಧವಾರ, ಜೂನ್ 30, 2021. ಪೂರ್ವಾಭಾದ್ರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.18 ರಿಂದ ಇಂದು ಮಧ್ಯಾಹ್ನ 1.56 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.44. ಸೂರ್ಯಾಸ್ತ: ಸಂಜೆ 6.54
ತಾ.30-06-2021 ರ ಬುಧವಾರದ ರಾಶಿಭವಿಷ್ಯ.
ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1
ವೃಷಭ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 9
ಮಿಥುನ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳ ವಾಸ ಸಂಭವ. ಶುಭ ಸಂಖ್ಯೆ: 2
ಕಟಕ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 8
ಸಿಂಹ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3
ಕನ್ಯಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 7
ತುಲಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 4
ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 6
ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 5
ಮಕರ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 9
ಕುಂಭ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1
ಮೀನ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಳಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 7
Published On - 6:31 am, Wed, 30 June 21