Daily Horoscope ದಿನ ಭವಿಷ್ಯ: ಈ ರಾಶಿಯವರಿಗಿಂದು ಮುಟ್ಟಿದ್ದು ಚಿನ್ನವಾಗುವ ಕಾಲ

Today Horoscope ಮಾರ್ಚ್ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

  • TV9 Web Team
  • Published On - 12:14 PM, 1 Mar 2021
Daily Horoscope ದಿನ ಭವಿಷ್ಯ: ಈ ರಾಶಿಯವರಿಗಿಂದು ಮುಟ್ಟಿದ್ದು ಚಿನ್ನವಾಗುವ ಕಾಲ
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಸೋಮವಾರ, ಮಾರ್ಚ್ 01, 2021. ಉತ್ತರೆ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 8.2 ರಿಂದ ಬೆಳಿಗ್ಗೆ 9.30. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.34. ಸೂರ್ಯಾಸ್ತ: ಸಂಜೆ 6.22.

ತಾ.01-03-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 7

ವೃಷಭ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 4

ಮಿಥುನ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 9

ಕರ್ಕ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 5

ಸಿಂಹ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 1

ಕನ್ಯಾ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 8

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 4

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕ ಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 6

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 3

ಮಕರ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 7

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 1

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937