Daily Horoscope – ದಿನ ಭವಿಷ್ಯ: ಈ ರಾಶಿಯವರಿಗಿಂದು ಸಂಗಾತಿಯು ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ

Today Horoscope: ಮಾರ್ಚ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

  • TV9 Web Team
  • Published On - 6:39 AM, 3 Mar 2021
Daily Horoscope - ದಿನ ಭವಿಷ್ಯ: ಈ ರಾಶಿಯವರಿಗಿಂದು ಸಂಗಾತಿಯು ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಬುಧವಾರ, ಮಾರ್ಚ್ 03, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.27 ರಿಂದ ಮಧ್ಯಾಹ್ನ 1.55. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.33. ಸೂರ್ಯಾಸ್ತ: ಸಂಜೆ 6.22.

ತಾ.03-03-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅವಕಾಶವಿದ್ದರೂ ಉದಾಸೀನ ಪ್ರವೃತ್ತಿ ತೋರಿಬರಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಚಿಂತೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಸಂಖ್ಯೆ: 5

ವೃಷಭ: ನಿಮ್ಮ ಖಾಸಗಿ ಬದುಕಿನಲ್ಲಿ ಮೂಗು ತೂರಿಸುವವರನ್ನು ನಿರ್ಲ್ಷ್ಯಕ್ಷಿಸುವುದೇ ಉತ್ತಮ. ನಿಮ್ಮ ಮನಸ್ಸಿಗೆ ಹಿಡಿಸಿದವರ ಜತೆ ಸುಂದರ ಕ್ಷಣ ಕಳೆಯಲಿದ್ದಾರೆ. ಅಧಿಕಾರಿ ವರ್ಗದವರಿಗೆ ಸ್ಥಾನಪಲ್ಲಟ ಭೀತಿಯಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ. ಶುಭ ಸಂಖ್ಯೆ: 4

ಮಿಥುನ: ಶುಭ ಮಂಗಲ ಕಾರ್ಯಕ್ಕಾಗಿ ಓಡಾಟ ನಡೆಸಲಿದ್ದೀರಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕವಾಗಿ ಧನ ಗಳಿಕೆಗೆ ಉತ್ತಮ ದಾರಿ ತೋರಿಬರಲಿದೆ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಕಿರು ಓಡಾಟ ನಡೆಸುವಿರಿ. ಶುಭ ಸಂಖ್ಯೆ: 7

ಕರ್ಕ: ಆತ್ಮವಿಶ್ವಾಸದ ಕೊರತೆಯಿಂದ ಹೊಸ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಲಾಭಕರ ದಿನಗಳು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಿದೆ. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 3

ಸಿಂಹ: ಕೌಟುಂಬಿಕವಾಗಿ ನಿಮಗೆ ಅನುಕೂಲಕರವಲ್ಲದ ಪರಿಸ್ಥಿತಿಯಿರಲಿದ್ದು, ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ದೂರ ಸಂಚಾರದಿಂದ ದೇಹಾಯಾಸವಾದೀತು. ಹಿರಿಯರಿಗೆ ಲಾಭಾಪೇಕ್ಷೆಯಿಲ್ಲದೇ ಮಾಡುವ ಕೆಲಸದಿಂದ ನೆಮ್ಮದಿ ಸಿಗಲಿದೆ. ಶುಭ ಸಂಖ್ಯೆ: 1

ಕನ್ಯಾ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆದರೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಅನಗತ್ಯ ಚಿಂತೆ ಬೇಡ. ಶುಭ ಸಂಖ್ಯೆ: 9

ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ಮನಸ್ಸಿಗೆ ಬೇಸರವಾದೀತು. ಪೋಷಕರ ಮನಸ್ಸಿಗೆ ನೋವುಂಟುಮಾಡಬೇಡಿ. ಕಳೆದು ಹೋದ ವಸ್ತು ಮರಳಿ ಪಡೆಯಲು ಪ್ರಯತ್ನ ನಡೆಸುವಿರಿ. ಇಷ್ಟದೇವರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 5

ವೃಶ್ಚಿಕ: ಸಂಗಾತಿಯು ನಿಮ್ಮ ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕೊಂಚ ಕಡಿವಾಣ ಹಾಕುವುದು ಉತ್ತಮ. ಗೃಹ ಸಂಬಂಧಿ ಕೆಲಸಗಳಿಗೆ ಅಡಚಣೆಗಳು ತೋರಿಬಂದೀತು. ನಿಧಾನವಾಗಿ ಯೋಚಿಸಿ ಹೆಜ್ಜೆಯಿಡಿ. ಶುಭ ಸಂಖ್ಯೆ: 8

ಧನು: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಸಂಗಾತಿಯ ಮನಸ್ಸೂ ಹಾಳುಮಾಡಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಮುಖ್ಯ. ಮಾತಿನ ಮೇಲೆ ಕೊಂಚ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆವಹಿಸಿ. ಶುಭ ಸಂಖ್ಯೆ: 4

ಮಕರ: ಕಾರ್ಯರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಮನೋಭಾವನೆಗಳನ್ನು ಹತೋಟಿಯಲ್ಲಿಡುವುದು ಮುಖ್ಯ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಒದಗಿಬರಲಿದೆ. ಶುಭ ಸಂಖ್ಯೆ: 7

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಕೌಟುಂಬಿಕವಾಗಿ ಸುಖ ಶಾಂತಿಗೆ ಕೊರತೆಯಿರದು. ಆದರೆ ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ. ಶುಭ ಸಂಖ್ಯೆ: 6

ಮೀನ: ಬಹಳ ದಿನಗಳ ನಂತರ ನಿಮ್ಮ ಇಷ್ಟದ ವ್ಯಕ್ತಿಗಳನ್ನು ಭೇಟಿಯಾದ ಖುಷಿ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಶುಭ ಸಂಖ್ಯೆ: 3


ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937