Horoscope Today – ದಿನ ಭವಿಷ್ಯ: ಈ ರಾಶಿಯವರಿಗೆ ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಂತು ಹೋಗುತ್ತೆ

Today Horoscope ಮಾರ್ಚ್ 29, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

  • TV9 Web Team
  • Published On - 6:34 AM, 29 Mar 2021
Horoscope Today - ದಿನ ಭವಿಷ್ಯ: ಈ ರಾಶಿಯವರಿಗೆ ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಂತು ಹೋಗುತ್ತೆ
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಸೋಮವಾರ, ಮಾರ್ಚ್ 29, 2021. ಹಸ್ತ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 7.44 ರಿಂದ ಇಂದು ಬೆಳಿಗ್ಗೆ 9.15ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.13. ಸೂರ್ಯಾಸ್ತ: ಸಂಜೆ 6.28.

ತಾ.29-03-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 3

ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ. ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 8

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1

ಕರ್ಕ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 9

ಸಿಂಹ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 5

ಕನ್ಯಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 4

ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6

ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರ ಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 4

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 1

ಕುಂಭ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 7

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 8

 


ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

 

ಇವನ್ನೂ ಓದಿ:

ವಾರ ಭವಿಷ್ಯ: ಒಂದು ವಾರದ ಭವಿಷ್ಯ; ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ?

ಏ. 6ಕ್ಕೆ ಕುಂಭ ರಾಶಿಗೆ ಗುರು ಗ್ರಹ ಪ್ರವೇಶ, ಮೇಷದಿಂದ ಮೀನದ ತನಕ ಏನು ಫಲ?