Horoscope Today ದಿನ ಭವಿಷ್ಯ: ಈ ರಾಶಿಯ ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು

Nitya Bhavishya: ಮಾರ್ಚ್ 30, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

  • TV9 Web Team
  • Published On - 6:28 AM, 30 Mar 2021
Horoscope Today ದಿನ ಭವಿಷ್ಯ: ಈ ರಾಶಿಯ ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಮಂಗಳವಾರ, ಮಾರ್ಚ್ 30, 2021. ಚಿತ್ತೆ ನಕ್ಷತ್ರ, ರಾಹುಕಾಲ : ಇಂದು ಸಂಜೆ 3.24 ರಿಂದ ಇಂದು ಸಂಜೆ 4.56ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.12. ಸೂರ್ಯಾಸ್ತ: ಸಂಜೆ 6.28.

ತಾ.30-03-2021 ರ ಮಂಗಳವಾರ ರಾಶಿಭವಿಷ್ಯ

ಮೇಷ: ನಿಮ್ಮ ಮನೆ ಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 5

ವೃಷಭ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 7

ಮಿಥುನ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 1

ಕರ್ಕ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 8

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲನ ಜೀವನವಿರುವುದು. ಶುಭ ಸಂಖ್ಯೆ: 4

ಕನ್ಯಾ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 5

ತುಲಾ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 2

ವೃಶ್ಚಿಕ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 6

ಧನು: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕ್ಷಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 3

ಮಕರ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 6

ಕುಂಭ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 8

ಮೀನ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 3


ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937