Horoscope Today ದಿನ ಭವಿಷ್ಯ: ತುಲಾ ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಬೇಕು ಎಚ್ಚರಿಕೆ

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಬುಧವಾರ, ಮಾರ್ಚ್ 31, 2021. ಸ್ವಾತಿ ನಕ್ಷತ್ರದ ರಾಶಿ ಭವಿಷ್ಯ.

  • TV9 Web Team
  • Published On - 6:25 AM, 31 Mar 2021
Horoscope Today ದಿನ ಭವಿಷ್ಯ: ತುಲಾ ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಬೇಕು ಎಚ್ಚರಿಕೆ
ರಾಶಿ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಬುಧವಾರ, ಮಾರ್ಚ್ 31, 2021. ಸ್ವಾತಿ ನಕ್ಷತ್ರ, ರಾಹುಕಾಲ : ಇಂದು ಮಧ್ಯಾಹ್ನ 12 :19 ರಿಂದ ಇಂದು ಮಧ್ಯಾಹ್ನ 1:51 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.11. ಸೂರ್ಯಾಸ್ತ: ಸಂಜೆ 6.28.

ತಾ.31-03-2021ರ ಬುಧವಾರದ ರಾಶಿಭವಿಷ್ಯ

ಮೇಷ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು. ಶುಭ ಸಂಖ್ಯೆ: 6

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ:  9

ಮಿಥುನ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 1

ಕರ್ಕ:ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 3

ಸಿಂಹ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 5

ಕನ್ಯಾ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 8

ತುಲಾ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 4

ವೃಶ್ಚಿಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವದು. ಶುಭ ಸಂಖ್ಯೆ: 7

ಧನು: ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 2

ಮಕರ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು. ಶುಭ ಸಂಖ್ಯೆ: 1

ಕುಂಭ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು. ಶುಭ ಸಂಖ್ಯೆ: 6

ಮೀನ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 8


ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937