Horoscope Today – ದಿನ ಭವಿಷ್ಯ; ಇಂದು ಯಾವ ಯಾವ ರಾಶಿಯವರಿಗೆ ಒಳಿತು? ಇಲ್ಲಿದೆ ಶನಿವಾರದ ಭವಿಷ್ಯ

ತುಲಾ ರಾಶಿಯವರಿಗೆ ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ ಸಾಧ್ಯತೆ.

Horoscope Today - ದಿನ ಭವಿಷ್ಯ; ಇಂದು ಯಾವ ಯಾವ ರಾಶಿಯವರಿಗೆ ಒಳಿತು? ಇಲ್ಲಿದೆ ಶನಿವಾರದ ಭವಿಷ್ಯ
Edited By:

Updated on: May 01, 2021 | 6:32 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಶನಿವಾರ, ಮೇ 01, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:1 ರಿಂದ ಇಂದು ಬೆಳಿಗ್ಗೆ 10:36 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.50. ಸೂರ್ಯಾಸ್ತ: ಸಂಜೆ 6.36.

ತಾ.01-05-2021 ರ ಶನಿವಾರದ ರಾಶಿಭವಿಷ್ಯ

ಮೇಷ:ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 6

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 9

ಮಿಥುನ: ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವದು. ಸಾಮಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 3

ಕರ್ಕ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 8

ಸಿಂಹ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 1

ಕನ್ಯಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 4

ತುಲಾ: ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.ಶುಭ ಸಂಖ್ಯೆ: 7

ವೃಶ್ಚಿಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.ಶುಭ ಸಂಖ್ಯೆ: 5

ಧನು: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.ಶುಭ ಸಂಖ್ಯೆ: 2

ಮಕರ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ.ಶುಭ ಸಂಖ್ಯೆ: 8

ಕುಂಭ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು.ಶುಭ ಸಂಖ್ಯೆ: 6

ಮೀನ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 9

 

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us