Horoscope Today – ದಿನ ಭವಿಷ್ಯ; ಶುಭಾ ಭಾನುವಾರದ ಭವಿಷ್ಯ ತಿಳಿದುಕೊಳ್ಳಿ

ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ,ಭಾನುವಾರ, ಮೇ 02, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಶುಭಾ ಭಾನುವಾರದ ಭವಿಷ್ಯ ತಿಳಿದುಕೊಳ್ಳಿ
ದಿನ ಭವಿಷ್ಯ
Edited By: ಆಯೇಷಾ ಬಾನು

Updated on: May 02, 2021 | 6:29 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ,ಭಾನುವಾರ, ಮೇ 02, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಸಂಜೆ 5 ಗಂಟೆಯಿಂದ ಇಂದು ರಾತ್ರಿ 6:35 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.49. ಸೂರ್ಯಾಸ್ತ: ಸಂಜೆ 6.36.

ತಾ.02-05-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ:  7

ವೃಷಭ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ:  3

ಮಿಥುನ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ:  9

ಕಟಕ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ:  4

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ:  1

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು. ಶುಭ ಸಂಖ್ಯೆ:  6

ತುಲಾ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ:  7

ವೃಶ್ಚಿಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ:  3

ಧನು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ:  2

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ. ಶುಭ ಸಂಖ್ಯೆ:  8

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ:  4

ಮೀನ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ:  7

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us