AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today-ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ಸಂಶಯಿತ ನಡೆಯಿಂದ ಮನಸ್ತಾಪ ಉಂಟಾಗಲಿದೆ

Today Horoscope ಮೇ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today-ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ಸಂಶಯಿತ ನಡೆಯಿಂದ ಮನಸ್ತಾಪ ಉಂಟಾಗಲಿದೆ
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 03, 2021 | 6:35 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಸೋಮವಾರ, ಮೇ 03, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ :ಇಂದು ಬೆಳಿಗ್ಗೆ 7.24 ರಿಂದ ಇಂದು ಬೆಳಿಗ್ಗೆ 8.59ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.49. ಸೂರ್ಯಾಸ್ತ: ಸಂಜೆ 6.36.

ತಾ.03-05-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 6

ವೃಷಭ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 1

ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 9

ಕಟಕ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 4

ಸಿಂಹ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 7

ತುಲಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 8

ವೃಶ್ಚಿಕ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 3

ಧನು: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 7

ಮಕರ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 4

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1

ಮೀನ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 4

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ