Horoscope – ದಿನ ಭವಿಷ್ಯ: ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗಲಿದೆ

Today Horoscope ಮೇ 05, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope - ದಿನ ಭವಿಷ್ಯ: ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗಲಿದೆ
ದಿನ ಭವಿಷ್ಯ
Follow us
ಆಯೇಷಾ ಬಾನು
| Updated By: Skanda

Updated on:May 06, 2021 | 2:14 PM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ನವಮಿ ತಿಥಿ, ಬುಧವಾರ, ಮೇ 05, 2021. ಧನಿಷ್ಠ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.12 ರಿಂದ ಇಂದು ಮಧ್ಯಾಹ್ನ 1.48ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.48. ಸೂರ್ಯಾಸ್ತ: ಸಂಜೆ 6.37.

ತಾ.05-05-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 2

ವೃಷಭ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 4

ಮಿಥುನ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 1

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 5

ಕನ್ಯಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 7

ತುಲಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 8

ಧನು: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 4

ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 1

ಕುಂಭ: ವೈಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವುದು. ವ್ಯಾಪಾರದಲ್ಲಿ ಹಣಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ಶುಭ ಸಂಖ್ಯೆ: 3

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:30 am, Wed, 5 May 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ