AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಕನ್ಯಾ ರಾಶಿಯವರಿಗೆ ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು

Nithya Bhavishya ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ,  ಶುಕ್ರವಾರ, ಮೇ 07, 2021 ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ: ಕನ್ಯಾ ರಾಶಿಯವರಿಗೆ ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 8:12 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ,  ಶುಕ್ರವಾರ, ಮೇ 07, 2021. ಪೂರ್ವಾಭಾದ್ರೆ ನಕ್ಷತ್ರ. ರಾಹುಕಾಲ: ಇಂದು ಬೆಳಿಗ್ಗೆ 10:35ರಿಂದ ಇಂದು  ಮಧ್ಯಾಹ್ನ 12:11 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.47. ಸೂರ್ಯಾಸ್ತ: ಸಂಜೆ 6.37.

ತಾ.07-05-2021 ರ  ಶುಕ್ರುವಾರ ರಾಶಿಭವಿಷ್ಯ

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 7

ವೃಷಭ: ಉದರಬೇನೆ ಬರುವ ಸಾಧ್ಯತೆ ಇದೆ .ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 2

ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 5

ಕರ್ಕ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 9

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 4

ಕನ್ಯಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ: 7

ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ವೃಶ್ಚಿಕ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ: 8

ಧನು: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 1

ಮಕರ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 4

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ:  6

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:45 am, Fri, 7 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ