Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ
Nithya Bhavishya ಮೇ 08, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಶನಿವಾರ, ಮೇ 08, 2021. ಉತ್ತರಾಭಾದ್ರ ನಕ್ಷತ್ರ, ರಾಹುಕಾಲ :ಇಂದು ಬೆಳಿಗ್ಗೆ 08.59 ರಿಂದ ಇಂದು ಬೆಳಿಗ್ಗೆ 10.35ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.38.
ತಾ.08-05-2021 ರ ಶನಿವಾರದ ರಾಶಿಭವಿಷ್ಯ
ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 7
ವೃಷಭ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 3
ಮಿಥುನ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 9
ಕಟಕ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 2
ಸಿಂಹ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ: 6
ಕನ್ಯಾ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು ಶುಭ ಸಂಖ್ಯೆ: 4
ತುಲಾ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 3
ವೃಶ್ಚಿಕ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 1
ಧನು: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7
ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 4
ಕುಂಭ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7
ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 5
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937